
ಮಂಗಳೂರು: ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ವರದಿಯಾಗಿದೆ.
ಅನ್ವರ್ ಮಹರೂಫಾ ದಂಪತಿಗಳ ಪುತ್ರ ಎರಡುವರೆ ವರ್ಷದ ಅನಸ್ ಪಿಸ್ತಾ ತಿನ್ನುತ್ತಿದ್ದ ವೇಳೆ ಅದರ ಸಿಪ್ಪೆಯನ್ನು ಕೂಡ ತಿಂದಿದ್ದು ಸಿಪ್ಪೆ ಮಗುವಿನ ಗಂಟಲಿನಲ್ಲಿ ಸಿಲುಕಿದೆ. ಮಗುವನ್ನು ಚಿಕಿತ್ಸೆಗಾಗಿ ತಕ್ಷಣವೇ ಉಪ್ಪಳದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ ಬಂದ ಮಗುವಿಗೆ ಉಸಿರಾಟದ ತೊಂದರೆ ಕಂಡು ಬಂದಿದ್ದು ,ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಗು ಮಾರ್ಗ ಮಧ್ಯೆ ಮೃತಪಟ್ಟಿದೆ ಎನ್ನಲಾಗಿದೆ.



















