
ಬೆಳಗಾವಿ: ಇಂದು ಬೆಳಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನುಮೂಳೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆನ್ನುಮೂಳೆಯ ಎಲ್1 ಎಲ್4 ಮೂಳೆಯಲ್ಲಿ ಬಲವಾದ ಪೆಟ್ಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಪೇಯ್ನ್ಕಿಲ್ಲರ್ ಇಂಜೆಕ್ಷನ್, ಸಿಟಿ ಸ್ಕ್ಯಾನ್ ಮಾಡಿದ್ದು ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ. ಇನ್ನೆರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡ್ತೀವಿ. ಒಂದು ತಿಂಗಳು ಬೆಡ್ ರೆಸ್ಟ್ ಮಾಡಬೇಕು ಎಂದು ಡಾ. ರವಿ ಪಾಟೀಲ ತಿಳಿಸಿದ್ದಾರೆ.



















