
ಶ್ರೀನಗರ: ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ನೆಲ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಆರು ಮಂದಿ ಸೈನಿಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸೈನಿಕರು ಗಸ್ತು ಕರ್ತವ್ಯದಲ್ಲಿದ್ದ ಸಂದರ್ಭ ಸೈನಿಕರೊಬ್ಬರು ಆಕಸ್ಮಿಕವಾಗಿ ನೆಲ ಬಾಂಬ್ ಮೇಲೆ ಹೆಜ್ಜೆ ಇಟ್ಟಿದ್ದು ಇದರಿಂದ ಸ್ಪೋಟ ಸಂಭವಿಸಿದೆ ಸ್ಪೋಟದಲ್ಲಿ ಆರು ಮಂದಿ ಸೈನಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



















