
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದೀಗ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ 9:45ಕ್ಕೆ ನಿಧನ ಹೊಂದಿದ್ದಾರೆ.
76 ವರ್ಷ ವಯಸ್ಸಿನ ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿದ್ದು ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ನ್ಯುಮೋನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲವು ಸಿನಿಮಾ ನಟ-ನಟಿಯರು ವಿಜಿ ಅವರನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಅವರು ಗುಣವಾಗುತ್ತಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದರು.
ನಾಳೆ ಬೆಳಿಗ್ಗೆ 10 ರಿಂದ 12 ಗಂಟೆ ವೇಳೆಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚಿತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.




















