
ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಅಶ್ಲೀಲ ಪದಬಳಕೆ ಮಾಡಿದ ಪ್ರಕರಣದಲ್ಲಿ ಸಿಐಡಿ ತನಿಖೆಗೆ ಅಸಹಕಾರ ತೋರಿದ ಆರೋಪ ಹಿನ್ನೆಲೆಯಲ್ಲಿ ಶುಕ್ರವಾರ ಖುದ್ದು ವಿಚಾರಣೆಗೆ ಹಾಜರಾಗುವಂತೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದೆ.
ಕೆಲ ದಿನಗಳ ಹಿಂದೆ ಈ ಪ್ರಕರಣ ಸಂಬಂಧ ಸಿಐಡಿ ವಿಚಾರಣೆಗೆ ರವಿ ಹಾಜರಾಗಿದ್ದು ಆ ವೇಳೆ ಅವರಿಗೆ ಧ್ವನಿ ಪರೀಕ್ಷೆಗೆ ಸ್ಯಾಂಪಲ್ ನೀಡುವಂತೆ ಅಧಿಕಾರಿ ಸೂಚಿಸಿದ್ದರು. ಇದಕ್ಕೆ ಆಕ್ಷೇಪಿಸಿದ ರವಿ ಅವರು, ಧ್ವನಿ ಪರೀಕ್ಷೆಗೊಳಪಡಲು ನಿರಾಕರಿಸಿದ್ದರು. ಹೀಗಾಗಿ ಅಸಹಕಾರ ತೋರಿದ್ದಾರೆಂದು ಸಿಐಡಿ ಅಧಿಕಾರಿಗಳು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಹಿನ್ನೆಲೆ ನ್ಯಾಯಾಲಯವು ನೋಟಿಸ್ ಜಾರಿಗೊಳಿಸಿದೆ.































































































































