
ಬೆಳಗಾವಿ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವದಂತಿಯ ಕುರಿತು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ಮಾತನಾಡಿ ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು ಈ ರೀತಿ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಯಾವ ಸಚಿವರಿಗೂ ಯಾವ ನಾಯಕರಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಆಂತರಿಕ ಸಂಘರ್ಷ ಸಂಬಂಧಿತ ವದಂತಿಗಳನ್ನು ಬಿಜೆಪಿ ನಾಯಕರು ಹರಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಬಿಜೆಪಿ ಪ್ರಾಯೋಜಿತ ಆಧಾರರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದೂ ಮನವಿ ಮಾಡಿದರು.





















