ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕಾರ್ಕಳ: ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಬಾಲ ವಿಕಾಸ ಅಕಾಡೆಮಿ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ವತಿಯಿಂದ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪ್ರೌಢ ಶಾಲಾ ಮಕ್ಕಳ ಭಾಷಣ ಸ್ಪರ್ಧೆಯಲ್ಲಿ ನಮ್ಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಬ್ರೊವಿನ್ ಅಗೇರಾ ಪ್ರಥಮ ಸ್ಥಾನ ಪಡೆದಿರುತ್ತಾನೆ.
ಇವನಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವರ್ಗ,ಸಿಬ್ಬಂದಿ ವರ್ಗ ಹಾಗೂ ಷೋಷಕರು ಅಭಿನಂದಿಸಿ ಶುಭ ಕೋರಿರುತ್ತಾರೆ.





















