
ಬೆಂಗಳೂರು: ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿ ರಾಜ್ಯ ಸರ್ಕಾರ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯ ಪರವಾಗಿದೆ. ನಾಮ ಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಗೊಳಿಸಿ, ಕನ್ನಡದಲ್ಲೇ ಆಡಳಿತ ನಡೆಸುತ್ತಿದೆ. ಅದೇ ರೀತಿ ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಕನ್ನಡಪರ ಸಂಘಟನೆಗಳು, ಹೋರಾಟಗಾರರು ಕೇಸು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮೊದಲು ಅರ್ಜಿ ಸಲ್ಲಿಸಬೇಕು. ಈ ಅರ್ಜಿಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಂಪುಟ ಉಪಸಮಿತಿ ಮುಂದೆ ಪ್ರಸ್ತಾಪಿಸಿ ತೀರ್ಮಾನ ಕೈಗೊಂಡು ಕೇಸುಗಳನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳಿದರು.
ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರು, ಈ ಕುರಿತು ಪ್ರತಿಕ್ರಿಯಿಸಿ ನಮ್ಮ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು ಸಂತಸವಾಗಿದೆ. ಹೋರಾಟಗಾರರು ಕೂಡಲೇ ಸರ್ಕಾರಕ್ಕೆ ಅರ್ಜಿಗಳನ್ನು ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ





















