
ನವದೆಹಲಿ: 2025ರ ಬಜೆಟ್ ನಲ್ಲಿ ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿ ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಪ್ರತಿ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದ್ದು ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ಬರೋಬ್ಬರಿ 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಾರೆ.





















