
ಬೆಂಗಳೂರು: ಕಾಲು ನೋವಿನಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಢೀರನೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಎಲ್ಲ ಪ್ರವಾಸ ಹಾಗೂ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.
ವಯೋಸಹಜವಾಗಿ ಮಂಡಿ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆಯುವುದಕ್ಕೆಂದು ದಿಢೀರನೇ ಎಲ್ಲ ಕಾರ್ಯಕ್ರಮಗಳನ್ನು ಹಾಗೂ ರಾಜ್ಯ ಪ್ರವಾಸವನ್ನು ರದ್ದುಗೊಳಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ಸೂಚನೆ ಹಾಗೂ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುವ ಸಾಧ್ಯತೆಗಳಿವೆ.





















