
ತಿರುಪತಿ: ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿಯು ಕೊನೆಗೂ ಕರ್ತವ್ಯದಲ್ಲಿದ್ದಾಗ ಹಿಂದೂ ಧರ್ಮದ ಆಚರಣೆಗಳನ್ನು ಪಾಲನೆ ಮಾಡದ 18 ಹಿಂದೂಯೇತರ ಸಿಬ್ಬಂದಿಯನ್ನು ಇತರೆ ಇಲಾಖೆಗಳಿಗೆ ವರ್ಗ ಮಾಡಿ ಆದೇಶ ಹೊರಡಿಸಿದೆ.
ಅಲ್ಲದೆ ಸ್ವಯಂ ನಿವೃತ್ತಿ ತೆಗೆದುಕೊಳ್ಳುವುದಾದರೆ ತೆಗೆದುಕೊಳ್ಳಬಹುದು ಎಂದು ಸೂಚಿಸಿರುವ ಟಿಟಿಡಿ ಈ ಆದೇಶವನ್ನು ಪಾಲಿಸಲು ವಿಫಲವಾದರೆ ಮುಂದಿನ ಕ್ರಮ ಕೈಗೊಳ್ಳಬೇಕಾಗುವುದು ಎಂದು ಎಚ್ಚರಿಕೆ ನೀಡಿದೆ.
ದೇವಾಲಯಗಳು ಮತ್ತು ಧಾರ್ಮಿಕತೆಯ ಆಧ್ಯಾತ್ಮಿಕ ಪಾವಿತ್ರ್ಯವನ್ನು ಕಾಪಾಡಲು ಈ ನಿರ್ಧಾರ ಕೈಗೊಳ್ಳಾಗಿದೆ ಎಂದು ಟಿಟಿಡಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.





















