31 C
Udupi
Sunday, May 3, 2026
spot_img
spot_img
HomeBlogಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಲು ಉಡುಪಿಯಿಂದ ರೈಲು ವ್ಯವಸ್ಥೆ: ಕೇಂದ್ರ ರೈಲ್ವೆ...

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಲು ಉಡುಪಿಯಿಂದ ರೈಲು ವ್ಯವಸ್ಥೆ: ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರ ಬಳಿ ಮನವಿ ಮಾಡಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಭಾಗದ ಅಸಂಖ್ಯಾತ ಹಿಂದುಗಳು ಬರೋಬ್ಬರಿ 144 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ತೆರಳಬೇಕು ಎನ್ನುವ ಆಸೆ ಹೊಂದಿದ್ದು ಇದನ್ನು ಈಡೇರಿಸಲು ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರ ಬಳಿ ಉಡುಪಿಯಿಂದ ಕೊಂಕಣ ಮಾರ್ಗದಲ್ಲಿ ವಿಶೇಷ ಕುಂಭಮೇಳ ರೈಲು ಓಡಿಸುವಂತೆ ಮನವಿ ಮಾಡಿದ್ದಾರೆ.

ಈ ಮನವಿಗೆ ಸ್ಪಂದಿಸಿರುವ ಕೇಂದ್ರ ರೈಲ್ವೆ ಸಚಿವರು ಶೀಘ್ರದಲ್ಲಿ ಕುಂಭಮೇಳಕ್ಕೆ ವಿಶೇಷ ರೈಲನ್ನು ಉಡುಪಿ ಪ್ರಯಾಗ್ರಾಜ್ ನಡುವೆ ಓಡಿಸುವುದಾಗಿ ಭರವಸೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂಸದ ಕೋಟ ದೇಶಾದ್ಯಂತ ರೈಲು ಬೋಗಿಗಳ ಕೊರತೆಯ ಕಾರಣಗಳನ್ನು ಇಲಾಖೆ ನೀಡುತ್ತಿದ್ದರೂ ಸಾಮಾನ್ಯ ಜನರಿಗೂ ಕೈಗೆಟುಕಲಿ ಎಂಬ ದೃಷ್ಟಿಯಿಂದ ಜನರಲ್ ಮತ್ತು ಎಸಿ ಕೋಚ್ ಇರುವ ರೈಲಿನ ವ್ಯವಸ್ಥೆಗೆ ಮನವಿ ಮಾಡಿದ್ದು ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಈ ಬೇಡಿಕೆ ಈಡೇರಿದ್ದಲ್ಲಿ ಕರಾವಳಿ ಭಾಗದ ಅಸಂಖ್ಯಾತ ಭಕ್ತರು ಕುಂಭಮೇಳಕ್ಕೆ ತೆರಳುವ ಅವಕಾಶ ಪಡೆಯಲಿದ್ದಾರೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page