
ಹೆಬ್ರಿ: ಗುರುವಾರ ಪಂಚಾಯಿತಿರಾಜ್ ಒಕ್ಕೂಟದ ಮಾಜಿ ಅಧ್ಯಕ್ಷರಾದ ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ ಅವರು ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಮನವಿ ಮಾಡಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಹೆಬ್ರಿ ತಾಲೂಕು ಕಚೇರಿ ಆವರಣದಲ್ಲಿ ಮುಷ್ಕರ ನಡೆಸುತ್ತಿದ್ದು ಹೀಗಾಗಿ 1956 ರಲ್ಲಿ ಇದ್ದ ಗ್ರಾಮ ಕಂದಾಯ ವೃತ್ತವನ್ನು ಬದಲಿಸಿ, ಕನಿಷ್ಠ ಗ್ರಾಮ ಪಂಚಾಯಿತಿಗೆ 1ರಂತೆ ಗ್ರಾಮ ಆಡಳಿತ ಅಧಿಕಾರಿಗಳ ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ.



















