ಛದ್ಮವೇಷ ಸ್ಪರ್ಧೆಯಲ್ಲಿ, ದ್ವಿತೀಯ ಸ್ಥಾನ ಪಡೆದ ಕಾರ್ಕಳ ಪುರಸಭಾ ಸದಸ್ಯ ಶುಭದರಾವ್

ಗ್ರಾಮ ಸ್ವರಾಜ್ಯ ಪ್ರತಿಷ್ಟಾನ ಮಂಗಳೂರು ಇವರ ಆಶ್ರಯದಲ್ಲಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿಯವರ ನೇತೃತ್ವದಲ್ಲಿ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಆಯೋಜಿಸಲಾದ ಹೊಂಬೆಳಕು ಕಾರ್ಯಕ್ರಮದ ಛದ್ಮವೇಷ ಸ್ಪರ್ಧೆಯಲ್ಲಿ ನಾಡ ಪ್ರಭು ಕೆಂಪೇಗೌಡ ವೇಷಕ್ಕೆ ಕಾರ್ಕಳ ಪರಸಭೆ ಸದಸ್ಯ ಶುಭದರಾವ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.