
ಪ್ರಯಾಗ್ರಾಜ್: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವು ನಾಳೆ ಅಂತ್ಯಗೊಳ್ಳಲಿದ್ದು, ಶಿವರಾತ್ರಿ ಹಿನ್ನೆಲೆ ನಾಳೆ ಕೊನೆಯ ಪುಣ್ಯಸ್ನಾನಕ್ಕೆ ಸ್ಥಳೀಯ ಆಡಳಿತ ಸಿದ್ಧತೆ ನಡೆಸುತ್ತಿದೆ.
ಈ ಹಿನ್ನೆಲೆ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್ ಝೋನ್ ಎಂದು ಘೋಷಿಸಲಾಗಿದ್ದು ಇಂದು ಮತ್ತು ನಾಳೆ ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಸ್ಥಳೀಯ ಆಡಳಿತ ಮತ್ತು ವೈದ್ಯಕೀಯ ತುರ್ತು ಸೇವೆಗಳ ವಾಹನಗಳಿಗೆ ಮಾತ್ರ ಪ್ರವೇಶವಿರುವುದು ಎಂದು ಸ್ಥಳೀಯ ಆಡಳಿತ ಮಾಹಿತಿ ನೀಡಿದೆ.
ಈವರೆಗೂ 63 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಅಮೃತಸ್ನಾನ ಮಾಡಿದ್ದು, ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶ್ವದಾದ್ಯಂತ ಕೋಟ್ಯಂತರ ಭಕ್ತರು ಭೇಟಿ ನೀಡಿದ್ದಾರೆ.








