
ಬೆಂಗಳೂರು: ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯು ಸ್ಫೋಟಕ ವಿಷಯವನ್ನು ಬಹಿರಂಗಪಡಿಸಿದ್ದು ಅದೇನೆಂದರೆ ಬೆಳಗ್ಗಿನ ಉಪಹಾರವಾದ ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ವರದಿ ಬಿಡುಗಡೆ ಮಾಡಿದೆ.
ಸಾರ್ವಜನಿಕರಿಂದ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ ಎಂದು ಸಾಲು ಸಾಲು ದೂರುಗಳು ಬಂದಿದ್ದು ಈ ಹಿನ್ನೆಲೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಸುಮಾರು 500 ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿ 35 ಕಡೆ ಪ್ಲಾಸ್ಟಿಕ್ ಬಳಕೆ ಮಾಡಿರುವುದು ಪತ್ತೆಯಾಗಿತ್ತು. ಈ ಬೆನ್ನಲ್ಲೇ 35 ಮಳಿಗೆದಾರರಿಗೆ ನೋಟಿಸ್ ನೀಡಲಾಗಿತ್ತು.
ಅಲ್ಲದೇ 500 ಕಡೆಗಳಲ್ಲಿ ಸಂಗ್ರಹಿಸಿದ್ದ ಮಾದರಿಗಳನ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಈ ಪೈಕಿ 35 ಡೇಂಜರ್ ಅಂತ ವರದಿಯಾಗಿದೆ. ಇಡ್ಲಿಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಶಾಖ ಹೆಚ್ಚಾದಂತೆ ಪಿಎಫ್‌ಎಎಸ್ ಕೆಮಿಕಲ್ ಎಂಬ ಹಾನಿಕಾರಕ ಅಂಶ ಹೊರ ಸೂಸುತ್ತದೆ ಎಂದು ಆಹಾರ ಸುರಕ್ಷತಾ ಇಲಾಖೆ ವರದಿ ಮಾಡಿದ್ದು ಹೀಗಾಗಿ ಈ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡುವುದಕ್ಕೆ ನಿರ್ಧಾರ ಕೈಗೊಂಡಿದೆ.






















































































