
ಬೆಂಗಳೂರು: ದಿನನಿತ್ಯ ಸೇವಿಸುವ ಆಹಾರ ಪದಾರ್ಥಗಳಲ್ಲೂ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗುತ್ತಿದ್ದು ಇದೀಗ ಇಡ್ಲಿ ಬಳಿಕ ಹಸಿರು ಬಟಾಣಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆಯಾಗಿರುವ ಕುರಿತು ಆಹಾರ ಸುರಕ್ಷತಾ ಇಲಾಖೆಯು ವರದಿ ಮಾಡಿದೆ.
ಈಗಾಗಲೇ ರಾಜ್ಯಾದ್ಯಂತ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಹಸಿರು ಬಟಾಣಿಯನ್ನು ಪರೀಕ್ಷೆಗೆ ಒಳಪಡಿಸಿದ್ದು ಅದರಲ್ಲಿ 8 ರಿಂದ 10 ಕಡೆ ಕ್ಯಾನ್ಸರ್ ಕಾರಕ ಬಣ್ಣ ಬಳಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಹಸಿರು ಬಟಾಣಿಗೆ ನಿಷೇಧಿತ ಬಣ್ಣ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ರಿಟೆಕ್ಷನ್ ಆಫ್ ಟಾಕ್ಸಿನ್ ಪ್ರಮಾಣ ಏರಿಕೆಯಾಗುತ್ತದೆ. ಇದರಿಂದ ಕಿಡ್ನಿ ಸಮಸ್ಯೆ, ಮೂತ್ರ ಉತ್ಪತ್ತಿ ಕಡಿಮೆಯಾಗುತ್ತದೆ. ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್ ರೋಗ ಬರುವ ಸಂಭವ ಹೆಚ್ಚಾಗಿರುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.
ಇನ್ನು ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರೋ ಹಿನ್ನೆಲೆ ಸಚಿವ ದಿನೇಶ್ ಗುಂಡೂರಾವ್ ಇವತ್ತು ಮಹತ್ವದ ಸುದ್ದಿಗೋಷ್ಠಿ ಮಾಡಲಿದ್ದು ಆಹಾರ ತಯಾರಿಕೆ ಮತ್ತು ಆಹಾರ ಪಾರ್ಸೆಲ್ ಕೊಡೋದಕ್ಕೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ಅಧಿಕೃತ ಆದೇಶ ಮಾಡುವ ಸಾಧ್ಯತೆ ಇದೆ. ಇದರ ಜೊತೆ ಹಸಿರು ಬಟಾಣಿಗೆ ಕಲರ್ ಲೇಪನ ಸಂಬಂಧವೂ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ.









