29.3 C
Udupi
Thursday, April 2, 2026
spot_img
spot_img
HomeBlogಕಾರ್ಕಳ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮುನಿಯಾಲು

ಕಾರ್ಕಳ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮುನಿಯಾಲು

spot_imgspot_img

ಕ್ರೀಡೆ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕಾರಣ ವಾಗುವುದರ ಜೊತೆಗೆ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಸಹಕಾರ: ಬೇಬಿ ಕೆ.ಶೆಟ್ಟಿ

ಕಾರ್ಕಳ: ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜು a weಮುನಿಯಾಲು ಇದರ 2024-2025 ನೇ ಸಾಲಿನ ಕಾಲೇಜು ಫೆ. 24 ರಂದು  ಕಾಲೇಜು ಮೈದಾನದಲ್ಲಿ ಜರುಗಿತು. ಕ್ರೀಡಾಕೂಟವನ್ನು ಉದ್ಘಾಟಿಸಿದ   ಸರಕಾರಿ ಪದವಿ ಪೂರ್ವ ಕಾಲೇಜು ಮುನಿಯಾಲಿನ ಪ್ರಾಂಶುಪಾಲರಾದ ಶ್ರೀಮತಿ. ಬೇಬಿ. ಕೆ. ಶೆಟ್ಟಿ ಮಾತನಾಡಿ ಕ್ರೀಡೆ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕಾರಣವಾಗುವು ಜೊತೆಗೆ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೂ ಸಹಕಾರಿಯಾಗಿದೆ ಎಂದರು.

ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ಸು ಗಳಿಸುವ ಮೂಲಕ ವಿಶ್ವವಿದ್ಯಾನಿಲಯ, ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ  ಮಟ್ಟದಲ್ಲಿ ಕ್ರೀಡಾಪಟುವಾಗಿ ಬೆಳೆಯಲು ಸಾಧ್ಯವಾಗುವುದು ಆದುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಸ್ಪರ್ಧೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು, ಈ ಮೂಲಕ ಕಾಲೇಜಿಗೆ ಕೀರ್ತಿ ತರುವಂತವರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸುಧಾಕರ ಕೆ. ಜಿ ಮಾತನಾಡಿ
ವಿದ್ಯಾರ್ಥಿಗಳಿಗೆ ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಬೇಕು. ಕ್ರೀಡೆ ಅವರ ಶೈಕ್ಷಣಿಕ ಪ್ರಗತಿಗೆ ಪೂರಕವಾಗುವಂತಾಗಬೇಕು ಎಂದು ಬಣ್ಣಿಸಿದರು.

ಪಥಸಂಚಲನೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುನಿಯಾಲಿನ
ವಿದ್ಯಾರ್ಥಿಗಳಿಂದ ಬ್ಯಾಂಡ್ ಸೆಟ್ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಜೂನಿಯರ್ ರಾಷ್ಟ್ರೀಯ ಕಬಡ್ಡಿ ಮತ್ತು ಕುಸ್ತಿ  ಕ್ರೀಡಾಪಟು ಕುಮಾರಿ ಸಾಕ್ಷಿ ಶೆಟ್ಟಿ ಹಾಗೂ  ಜೂನಿಯರ್ ರಾಷ್ಟ್ರೀಯ ಚೆಸ್ ಕ್ರೀಡಾಪಟು ಪ್ರಣೀತ್ ಜಿ.ಶೆಟ್ಟಿಗಾರ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಪ್ರೊ.ವಿಶ್ವೇಶ್ವರ. ಎನ್. ಗಾಂವ್ಕರ್ ಹಾಗೂ ಎಲ್ಲಾ ಬೋಧಕ, ಬೋಧಕೇತರ ವೃಂದದವರು ಹಾಜರಿದ್ದರು. ತೀರ್ಪುಗಾರರಾಗಿ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಸುಶಾಂತ್ ಹಾಗೂ ಅರ್ಚನಾ ಸಹಕರಿಸಿದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕುತುಬುದ್ದೀನ್ ವಾಗಣಗೇರ ಸ್ವಾಗತಿಸಿದರು. ಹಾಗೂ ಪಥಸಂಚಲನ ನಿರ್ವಹಿಸಿದರು ಕಾರ್ಯಕ್ರಮವನ್ನು ಕ್ರೀಡಾ ಸಂಚಾಲಕರಾದ ಡಾ.ಮಂಜುನಾಥ ಆಚಾರಿ ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page