30.9 C
Udupi
Wednesday, April 1, 2026
spot_img
spot_img
HomeBlogಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ 52 ಆಹಾರ ಉತ್ಪಾದಕರಿಗೆ ನೋಟಿಸ್‌ ನೀಡಲಾಗಿದೆ: ಸಚಿವ ದಿನೇಶ್...

ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ 52 ಆಹಾರ ಉತ್ಪಾದಕರಿಗೆ ನೋಟಿಸ್‌ ನೀಡಲಾಗಿದೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಸುದ್ದಿಗೋಷ್ಠಿ ನಡೆಸಿ ಜನವರಿ ಹಾಗೂ ಫೆಬ್ರುವರಿಯಲ್ಲಿ ಆಹಾರ ಸುರಕ್ಷತೆ ಇಲಾಖೆಯಿಂದ ನಡೆಸಿದ ವಿವಿಧ ಆಹಾರಗಳ ಪರಿಶೀಲನಾ ಅಭಿಯಾನದ ಕುರಿತು ವಿವರಣೆ ನೀಡಿ ಮಾತನಾಡಿದ್ದು ಈ ವೇಳೆ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿದ್ದ 52 ಆಹಾರ ಉತ್ಪಾದಕರಿಗೆ ನೋಟಿಸ್‌ ನೀಡಲಾಗಿದ್ದು, ರಾಜ್ಯದಲ್ಲಿ ಆಹಾರ ಬೇಯಿಸಲು ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗುವುದು ಎಂದು ತಿಳಿಸಿದರು.

ಇನ್ನು ಹಸಿರು ಬಟಾಣಿಗಳಲ್ಲಿ ರಾಸಾಯನಿಕ ಬಣ್ಣ ಬಳಕೆ ಕುರಿತು 31 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದೆ. ಈ ಪೈಕಿ 26 ಆರೋಗ್ಯಕ್ಕೆ ಸುರಕ್ಷಿತವಲ್ಲ ಎಂಬುದು ತಿಳಿದುಬಂದಿದೆ. ಈ ಬಗ್ಗೆ ವರದಿಯನ್ನು ಪೂರ್ಣ ಪ್ರಮಾಣದಲ್ಲಿ ವಿಶ್ಲೇಷಿಸಿ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಈ ವರ್ಷದ ಜನವರಿಯಿಂದ ವಿವಿಧ ಹೋಟೆಲ್‌, ಮಳಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳ ಬಳಿಯಿಂದ ಒಟ್ಟು 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದ್ದು, ಈ ಪೈಕಿ 26 ಮಾದರಿ ಅಸುರಕ್ಷಿತ ಹಾಗೂ 28 ತೀರಾ ಕಳಪೆ ಎಂಬುದು ತಿಳಿದು ಬಂದಿದೆ. ಇನ್ನು ಜನವರಿಯಲ್ಲಿ 681 ರಷ್ಟು ಇಡ್ಲಿ ಮಾದರಿ ಪಡೆಯಲಾಗಿದೆ. ಇಡ್ಲಿ ಮಾಡುವಾಗ ಪ್ಲಾಸಿಕ್ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಘಟನೆ ಸಂಬಂಧ 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದು, ಆಹಾರ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಹಾಳೆ ಬಳಕೆ ನಿಷೇಧಿಸಿ ಆದೇಶವನ್ನೂ ಮಾಡಲಾಗುವುದು.

ಔಷಧ ಆಡಳಿತ ವಿಭಾಗದ ಅಧಿಕಾರಿಗಳು ಔಷಧ ಪರೀಕ್ಷಾ ಪ್ರಯೋಗಾಲಯಗಳಲ್ಲಿ ಜನವರಿಯಲ್ಲಿ 1,133 ಔಷಧ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಿದ್ದರು. ಅವುಗಳಲ್ಲಿ 938 ಉತ್ತಮ ಗುಣಮಟ್ಟದ ಔಷಧ ಹಾಗೂ 106 ಗುಣಮಟ್ಟ ಇಲ್ಲದ ಕಳಪೆ ಔಷಧಗಳೆಂದು ನಿರ್ಧಾರವಾಗಿದೆ. ಫೆಬ್ರುವರಿ ತಿಂಗಳಲ್ಲಿ 1,841 ಔಷಧ ಮಾದರಿಗಳನ್ನು ವಿಶ್ಲೇಷಣೆಗೆ ಪಡೆಯಲಾಗಿದೆ. ಇಲ್ಲಿಯವರೆಗೆ 58 ಮಾದರಿಗಳು ಕಳಪೆ ಗುಣಮಟ್ಟದ ಔಷಧಗಳೆಂದು ನಿರ್ಧಾರವಾಗಿದ್ದು, ಪರೀಕ್ಷೆ ಮುಂದುವರೆದಿದೆ ಎಂದು ವಿವರಣೆ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page