
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೆಯ ಬಜೆಟ್ ಮಂಡಿಸಲಿದ್ದಾರೆ.
ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಜೆಟಿಗೂ ಮುನ್ನ ಬಿಜೆಪಿ ಜೆಡಿಎಸ್ ಪ್ರತಿಭಟನೆ ನಡೆಸಿವೆ. ಎಸ್ ಸಿ ,ಎಸ್ಪಿ – ಟಿಎಸ್ಪಿ ಹಣಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು .ಶಾಸಕರ ಕ್ಷೇತ್ರಗಳಿಗೆ ತಲಾ 150 ಕೋಟಿ ಅನುದಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಬಜೆಟ್ ನ ಬಗ್ಗೆ ಸಿಎಂ ಸಿದ್ದರಾಮಯ್ಯ, ಇದು ಅಭಿವೃದ್ಧಿಯ ಬಜೆಟ್, ಈ ಸಲ ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ.






















































