
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದು ಮಾ.11 ರಿಂದ ಮುಂಗಾರು ಪೂರ್ವ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾ.11ರಿಂದ ಮಾರ್ಚ್ 14ರವರೆಗೆ ಕರಾವಳಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26°ಡಿಗ್ರಿ ಸೆಲ್ಸಿಯಸ್



















