
ಕಾರ್ಕಳ: ತೋಟಗಾರಿಕೆ ಇಲಾಖೆ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
ಆಸಕ್ತ ಅರ್ಹ ರೈತ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ತೇರ್ಗಡೆಯಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಪಹಣಿ ನೀಡುವುದು ಕಡ್ಡಾಯ. ಅರ್ಜಿ ಸಲ್ಲಿಕೆಗೆ ಏಪ್ರಿಲ್ 1 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಮತ್ತು ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://horticulturedir.karnataka.gov.in ಅಥವಾ ಕಾರ್ಕಳ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.