30.7 C
Udupi
Thursday, February 12, 2026
spot_img
spot_img
HomeBlogವಿದ್ಯಾರ್ಥಿಗಳಲ್ಲಿ ಸಾಹಸ ಪ್ರವೃತ್ತಿ, ವೈಯಕ್ತಿಕ ಬೆಳವಣಿಗೆ ಹಾಗೂ ಹೊರಾಂಗಣ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿಭುವನೇಂದ್ರ ರೆಸಿಡೆನ್ಶಿಯಲ್...

ವಿದ್ಯಾರ್ಥಿಗಳಲ್ಲಿ ಸಾಹಸ ಪ್ರವೃತ್ತಿ, ವೈಯಕ್ತಿಕ ಬೆಳವಣಿಗೆ ಹಾಗೂ ಹೊರಾಂಗಣ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿಭುವನೇಂದ್ರ ರೆಸಿಡೆನ್ಶಿಯಲ್ ಶಾಲೆಯಲ್ಲಿ ಎರಡು ದಿನಗಳ ಸಾಹಸ ಶಿಬಿರ

ವಿದ್ಯಾರ್ಥಿಗಳಲ್ಲಿ ಸಾಹಸ ಪ್ರವೃತ್ತಿ, ವೈಯಕ್ತಿಕ ಬೆಳವಣಿಗೆ ಹಾಗೂ ಹೊರಾಂಗಣ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭುವನೇಂದ್ರ ರೆಸಿಡೆನ್ಶಿಯಲ್ ಶಾಲೆಯಲ್ಲಿ ಎರಡು ದಿನಗಳ ಸಾಹಸ ಶಿಬಿರವನ್ನು ಆಯೋಜಿಸಲಾಯಿತು.

ಶಾಲಾ ಸಂಚಾಲಕರಾದ ಶ್ರೀ. ಕೆ. ವೆಂಕಟೇಶ್ ಪ್ರಭು ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಶಿಬಿರದ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾದಂತಹ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಮಂಜುನಾಥ್ ಎ. ಕೋಟ್ಯಾನ್‌ ಮಾತಾಡಿ,ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಸಿಬಿಎಸ್ಇ ಪಠ್ಯಕ್ರಮದ ಜೊತೆಗೆ ಇಂತಹ ಸಾಹಸಮಯ ಚಟುವಟಿಕೆಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ, ಇಂತಹ ಶಿಬಿರಗಳಲ್ಲಿ ಭಾಗವಹಿಸುವುದರ ಮೂಲಕ ಸಾಹಸ ಪ್ರವೃತ್ತಿಯನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಆಯೋಜಕರಾದ ಪೋಡಾಕ್‌ ಬೂಟ್‌ ಕ್ಯಾಂಪ್ನ ವ್ಯವಸ್ಥಾಪಕ ನಿರ್ದೇಶಕರಾದ ಶೇಖ್ ಇರ್ಫಾನ್ ಶಿಬಿರದ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಪ್ರಮೀಳಾ ಕೋಟ್ಯಾನ್‌ ಅತಿಥಿಗಳನ್ನು ಸ್ವಾಗತಿಸಿದರು.ಇಂಗ್ಲಿಷ್ ಶಿಕ್ಷಕಿ ಗೀತಾ ಶೆಟ್ಟಿಗಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಕನ್ನಡ ಶಿಕ್ಷಕ ರಾಕೇಶ್‌ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page