24.7 C
Udupi
Saturday, February 14, 2026
spot_img
spot_img
HomeBlog"ಮನ್ ಕಿ ಬಾತ್" ನಲ್ಲಿ ಯುಗಾದಿ ಹಬ್ಬದ ಶುಭಾಶಯ ಕೋರಿ ಯೋಗ, ಮಳೆ ನೀರು, ಜಲ...

“ಮನ್ ಕಿ ಬಾತ್” ನಲ್ಲಿ ಯುಗಾದಿ ಹಬ್ಬದ ಶುಭಾಶಯ ಕೋರಿ ಯೋಗ, ಮಳೆ ನೀರು, ಜಲ ಸಂರಕ್ಷಣೆ, ಬೇಸಿಗೆ ರಜೆ ಕುರಿತು ಮಾತನಾಡಿದ ಪ್ರಧಾನಿ ಮೋದಿ

spot_imgspot_img

ನವದೆಹಲಿ: ಇಂದು ಮನ್ ಕಿ ಬಾತ್ ನ 120 ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡ, ಮರಾಠಿ, ತೆಲುಗು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಯುಗಾದಿ ಹಬ್ಬದ ಶುಭಾಶಯ ತಿಳಿಸಿ ಹಲವು ವಿಚಾರಗಳ ಮೇಲೆ ಬೆಳಕು ಚೆಲ್ಲಿದ್ದಾರೆ.

ಭಾರತದಾದ್ಯಂತ ವಿವಿಧ ಹಬ್ಬಗಳ ರೂಪದಲ್ಲಿ ಆಚರಿಸಲಾಗುವ ಸಾಂಪ್ರದಾಯಿಕ ಭಾರತೀಯ ಹೊಸ ವರ್ಷಕ್ಕೆ ಪ್ರಧಾನಿ ಮೋದಿ ಶುಭಾಶಯ ಕೋರಿ ಈ ಶುಭ ಸಂದರ್ಭವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಉತ್ಸಾಹವನ್ನು ತರಲಿ, ಇದು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದಲ್ಲಿ ಹೊಸ ಶಕ್ತಿಯನ್ನು ತುಂಬಲಿ ಎಂದಿದ್ದಾರೆ.

ಮಕ್ಕಳಿಗೆ ಇಷ್ಟು ದಿನ ಪರೀಕ್ಷೆಗಳ ಬಗ್ಗೆ ಸಲಹೆಗಳನ್ನು ಕೊಡಲಾಗುತ್ತಿತ್ತು, ಈಗ ಪರೀಕ್ಷೆಗಳು ಮುಗಿದು ಬೇಸಿಗೆ ರಜೆ ಶುರುವಾಗುತ್ತಿದೆ. ಹೊಸ ಹವ್ಯಾಸವನ್ನು ಅಳವಡಿಸಿಕೊಳ್ಳುವ ಜೊತೆಗೆ ತಮ್ಮ ಕೌಶಲ್ಯಗಳನ್ನು ಮತ್ತಷ್ಟು ಬೆಳೆಸಿಕೊಳ್ಳುವ ಸಮಯ ಇದು. ಇಂದು ಕೇವಲ ಶಾಲೆಯಲ್ಲಿ ಮಾತ್ರ ಕಲಿಯಬೇಕು ಎಂದೇನಿಲ್ಲ. ಯಾವುದೇ ಸಂಸ್ಥೆ, ಶಾಲೆ, ಸಾಮಾಜಿಕ ಸಂಸ್ಥೆ ಅಥವಾ ಕೇಂದ್ರಗಳು ಬೇಸಿಗೆ ಚಟುವಟಿಕೆಗಳನ್ನು ಆಯೋಜಿಸುತ್ತಿದ್ದರೆ ಅದನ್ನು #MYHOLIDAYS ನೊಂದಿಗೆ ಹಂಚಿಕೊಳ್ಳಿ ಎಂದು ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ ಈ ಅಭಿಯಾನದ ಅಡಿಯಲ್ಲಿ , ದೇಶದ ಹಲವು ಭಾಗಗಳಲ್ಲಿ ನೀರಿನ ಸಂರಕ್ಷಣೆಗಾಗಿ ಅಭೂತಪೂರ್ವ ಕೆಲಸ ಮಾಡಲಾಗಿದ್ದು ಕಳೆದ 7-8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು ಹೊಸದಾಗಿ ನಿರ್ಮಿಸಲಾದ ಟ್ಯಾಂಕ್‌ಗಳು, ಕೊಳಗಳು ಮತ್ತು ಇತರ ನೀರಿನ ಪುನರ್ಭರ್ತಿ ರಚನೆಗಳ ಮೂಲಕ ನೀರನ್ನು ಸಂರಕ್ಷಿಸಲಾಗಿದೆ ಎಂದರು.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page