ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ…

ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ,ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ ,ಧಾರವಾಡ, ಬೆಳಗಾವಿ ,ಬೆಂಗಳೂರು ನಗರ ,ಹಾಸನ ,ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಯಚೂರು, ಯಾದಗಿರಿ ,ಬೀದರ್ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ದಾಖಲಾಗಿದೆ.




