
ರಾಜ್ಯದಲ್ಲಿ ಏಪ್ರಿಲ್ 8 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ,ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೂ ಮಳೆಯ ಮುನ್ಸೂಚನೆ ನೀಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ ,ಗದಗ ,ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಗಾಳಿ ಬೀಸಲಿದ್ದು ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್





















