
ಆಹಾರ ಇಲಾಖೆಯು ಆಘಾತಕಾರಿ ವಿಚಾರವನ್ನು ಬಹಿರಂಗಪಡಿಸಿದ್ದು ಅದೇನೆಂದರೆ ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ವರದಿ ಮಾಡಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಕುರಿತು ವಿಕಾಸಸೌಧದಲ್ಲಿ ಮಹತ್ತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು ಈ ವೇಳೆ ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ 72 ಸುರಕ್ಷಿತ ಹಾಗೂ 95 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ.
ಕುಡಿಯುವ ನೀರಿನ ಬಾಟಲಿ ಮಾತ್ರವಲ್ಲದೇ ಖಾರ ಮಿಕ್ಚರ್, ಪನ್ನೀರ್ ಹಾಗೂ ಐಸ್ಕ್ರೀಂ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು ತಯಾರಿಕಾ ಘಟಕಗಳಲ್ಲಿ ಲೋಪ ಕಂಡುಬಂದ ಹಿನ್ನೆಲೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.





















