
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ, ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಶಿಕ್ಷಕರು ಹಾಗೂ ಪೋಷಕರಿಗೆ ಧನ್ಯವಾದಗಳು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.





















