
ಏಪ್ರಿಲ್ 13ರಂದು ಸಂಜೆ 5:30ಕ್ಕೆ ಸಾಣೂರಿನ ಪಟೇಲ್ ಮುದ್ದಣ್ಣ ಶೆಟ್ಟಿ ಕ್ಯಾಂಪಸ್ ರಾಧಾ ಫಾರ್ಮ್ಸ್ ನಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್, ಪಿಯು ಕಾಲೇಜ್ ಉದ್ಘಾಟನೆಗೊಳ್ಳಲಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಸ್ಥಾಪಿತವಾಗುತ್ತಿರುವ ಈ ಸಂಸ್ಥೆ ದಶಕಗಳ ಕಾಲ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದು, ವಿದ್ಯಾರ್ಥಿಗಳ ಜೊತೆ ನಿಕಟ ಸಂಬಂಧ ಹೊಂದಿದ್ದ ಸಾಣೂರುಗುತ್ತು ದೇವಿಪ್ರಸಾದ್ ಶೆಟ್ಟಿ ಅವರ ಕನಸಿನ ಸಂಸ್ಥೆ ಇದಾಗಿದೆ.
ಕಾರ್ಕಳದ ಶಾಸಕರಾದ ಶ್ರೀ ಸುನಿಲ್ ಕುಮಾರ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಡಾ. ಎಂ ಮೋಹನ್ ಆಳ್ವಾ, ಶ್ರೀ ಗುರ್ಮೇ ಸುರೇಶ್ ಶೆಟ್ಟಿ, ಶ್ರೀಮತಿ ಜಯಶ್ರೀ ಅಮರನಾಥ ಶೆಟ್ಟಿ, ಡಾ. ಸುಧಾಕರ್ ಶೆಟ್ಟಿ, ಶ್ರೀ ಇಂದ್ರಾಳಿ ಜಯಕರ ಶೆಟ್ಟಿ ಹಾಗೂ ಮತ್ತಿತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.





















