
ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಎಪ್ರಿಲ್ 14 ಸೋಮವಾರದಂದು ನಿಧನ ಹೊಂದಿದ್ದಾರೆ. 76 ವರ್ಷ ವಯಸ್ಸಾಗಿತ್ತು,ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ರಾತ್ರಿ 2.30ರ ಸುಮಾರಿಗೆ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.
800ಕ್ಕೂ ಅಧಿಕಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ ಅವರು 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ವಿಜಯಾ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅವರಿಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಬಂದಿತು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಭಾರೀ ನಷ್ಟವಾಗಿದೆ.





















