ಶಿಕ್ಷಣ ಮತ್ತು ಸಂಘಟನೆ ಕ್ಷೇತ್ರದಲ್ಲಿ, ಡಾ. ರವೀಂದ್ರ ಶೆಟ್ಟಿ ಬಜಗೋಳಿ ಇವರಿಗೆ ಸನ್ಮಾನ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ,ಇದರ ಉಡುಪಿ ಜಿಲ್ಲಾ 17 ನೇ ಯ ಕನ್ನಡ ಸಾಹಿತ್ಯ ಸಮ್ಮೇಳನ ಸುಕೃತಿ – 2025 ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಮತ್ತು ಕಿರಿಯ ಯತಿ ಶ್ರೀ ಸುಶೀಂದ್ರ ತೀರ್ಥರು ದೀಪ ಉದ್ಘಾಟಿಸಿದ್ದು, ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳ ನಾಡಿದ್ದು, ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದಲ್ಲಿ ಶಿಕ್ಷಣ ಮತ್ತು ಸಂಘಟನಾ ಕ್ಷೇತ್ರದ ಸಾಧನೆಗಾಗಿ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಇವರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು.













