
ಇಸ್ಲಾಮಾಬಾದ್: ಭಾರತವು ಪಾಕಿಸ್ತಾನದ ಉಗ್ರ ತಾಣಗಳ ಮೇಲೆ ನಡೆಸಿದ ದಾಳಿಯ ಕುರಿತು ಪ್ರತಿಕ್ರಿಯಿಸಿದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಭಾರತ ತೀವ್ರ ಪರಿಣಾಮಗಳನ್ನ ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರೀ ಬೆಲೆ ತೆರಬೇಕಾಗುತ್ತದೆ. ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ ಎಂದರಲ್ಲದೇ ನಾವು ದೇಶವನ್ನು ರಕ್ಷಿಸಲು ನಮ್ಮ ಕೊನೆಯುಸಿರು ಇರುವವರೆಗೂ ಹೋರಾಡುತ್ತೇವೆ ಎಂದು ಭಾರತದ ವಿರುದ್ಧ ಕಟು ಮಾತುಗಳನ್ನಾಡಿದ್ದಾರೆ.
ಪಹಲ್ಗಾಮ್ ದಾಳಿ ನಡೆದಾಗ ನಾನು ಟರ್ಕಿಗೆ ಭೇಟಿ ನೀಡಿದ್ದೆ. ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಆಗಲೇ ನಾವು ಈ ಬಗ್ಗೆ ಸ್ಪಷ್ಟನೆ ನೀಡಿ ತನಿಖೆಗೆ ಸಹಕರಿಸಲೂ ಸಿದ್ಧರಿದ್ದೇವೆ ಎಂದು ಹೇಳಿದ್ದರೂ ಭಾರತ ನಮ್ಮ ಸ್ಪಷ್ಟನೆಯನ್ನು ಸ್ವೀಕರಿಸದೇ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.



















