
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್.ಡಿ.ಕೋಟೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದು ಈ ವೇಳೆ ‘ಪಾಕಿಸ್ತಾನ ವಿರುದ್ಧದ ಅಪರೇಷನ್ ಸಿಂದೂರ’ ಸೇನಾ ಕಾರ್ಯಾಚರಣೆಯ ಯಶಸ್ಸು ಭಾರತೀಯ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಅದರಲ್ಲಿ ಹಕ್ಕು ಪ್ರತಿಪಾದನೆ ಮಾಡಬಾರದು ಎಂದು ಹೇಳಿದ್ದಾರೆ.
ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆ ಸಂಬಂಧ ಕೇಂದ್ರದ ತೀರ್ಮಾನಕ್ಕೆ ಬದ್ಧ. ಇದಕ್ಕೂ ಮುನ್ನ ಸರ್ವಪಕ್ಷಗಳ ಸಭೆ, ವಿಶೇಷ ಅಧಿವೇಶನ ಕರೆಯಬೇಕಿತ್ತು. ಇನ್ನು, ಕದನ ವಿರಾಮ ಘೋಷಣೆ ಸಂಬಂಧ ಅಮೆರಿಕ ಅಧ್ಯಕ್ಷ ಟ್ರಂಪ್
ಮಾಡಿರುವ ಟ್ವಿಟ್ ಬಗ್ಗೆಯಾಗಲಿ, ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಬಗ್ಗೆಯಾಗಲಿ ನಾನು ಮಾತನಾಡುವುದಿಲ್ಲ. ನನ್ನ ಮಾತನ್ನು ಯುದ್ಧ ವಿರಾಮಕ್ಕಷ್ಟೇ ಸೀಮಿತಗೊಳಿಸುತ್ತೇನೆ ಎಂದು ಹೇಳಿದರು.




















