
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರಿಗೆ ಬೆಳಗಿನ ಉಪಹಾರ ನೀಡುವ ಕುರಿತು ದೇಗುಲದ ನೂತನ ವ್ಯವಸ್ಥಾಪನ ಸಮಿತಿಯು ಚಿಂತನೆ ನಡೆಸಿದೆ.
ಶ್ರೀ ಕ್ಷೇತ್ರದಲ್ಲಿ ಈಗಾಗಲೇ ಮಧ್ಯಾಹ್ನ ಹಾಗೂ ರಾತ್ರಿಯ ಭೋಜನ ಪ್ರಸಾದ ವಿತರಿಸಲಾಗುತ್ತಿದ್ದು ಇದೀಗ ಬೆಳಗ್ಗಿನ ಉಪಹಾರದ ಕುರಿತು ಚರ್ಚೆ ನಡೆಸಿದ ಸಮಿತಿಯು ಮೆನು, ಸಮಯದ ಬಗ್ಗೆ ಮುಂದಿನ ದಿನಗಳಲ್ಲಿ ಅಂತಿಮ ನಿರ್ಧಾರವನ್ನು ಕೈಗೊಂಡು ಬಳಿಕ ಈ ಹೊಸ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ತಿಳಿಸಿದೆ.






















































