
ಬೆಂಗಳೂರು,: ವಿದ್ಯಾರ್ಥಿಗಳಿಗೆ ವಿಜ್ಞಾನ, ಕಾನೂನು, ಹಣಕಾಸು ಹೀಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಂಬಂಧಿಸಿ ದಂತೆ ಸಾಕಷ್ಟು ವಿಷಯಗಳ ಅಧ್ಯಯನಕ್ಕೆ ಅವಕಾಶವಿದೆ. ಆದರೆ, ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಲು ಇಚ್ಛೆಯುಳ್ಳವರಿಗೆ ಅಧ್ಯಯನ ಮಾಡಲು ಯಾವುದೇ ಅವಕಾಶವಿಲ್ಲ. ಹಾಗಾಗಿ ರಾಜಕೀಯ ಕಾಲೇಜು ಆರಂಭಿಸಿ ಸೂಕ್ತ ತರಬೇತಿ ನೀಡುವ ಚಿಂತನೆ ನಡೆಸಿರುವುದಾಗಿ ಸ್ಪೀಕರ್ ಯು.ಟಿ ಖಾದರ್ ಕಾರ್ಯಕ್ರಮ ವೊಂದರಲ್ಲಿ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ಸಂದರ್ಭದಲ್ಲಿ ರಾಜಕೀಯ ಕಾಲೇಜು ಆರಂಭಿಸುವ ವಿಷಯದ ಬಗ್ಗೆ ಕಾನೂನಾತ್ಮಕವಾಗಿ ಚರ್ಚೆ ನಡೆಸಿ ಅನುಷ್ಠಾನದ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.
ಇದೇ ವಿಷಯಕ್ಕೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ನಾನು ಮತ್ತು ಸ್ಪೀಕರ್ ಯು ಟಿ ಖಾದರ್ ಸೇರಿ ರಾಜಕೀಯ ಅಧ್ಯಯನಕ್ಕೆ ಕಾಲೇಜು ಆರಂಭಿಸುವ ಚಿಂತನೆ ಮಾಡಿದ್ದೆವು. ಅದು ಇನ್ನೂ ಒಂದು ಹಂತಕ್ಕೆ ಬರಬೇಕಾಗಿದೆ. ಕಾನೂನು ಸಚಿವರಾದ ಎಚ್ ಕೆ ಪಾಟೀಲ್ ಹಾಗೂ ಇತರರೊಂದಿಗೆ ಚರ್ಚಿಸಿ ಮಕ್ಕಳಿಗೆ ರಾಜಕೀಯ ಕ್ಷೇತ್ರದಲ್ಲೂ ಅಧ್ಯಯನಕ್ಕೆ ಅವಕಾಶವನ್ನು ಕಲ್ಪಿಸುವ ಪ್ರಯತ್ನ ಮಾಡಲಾಗುವುದು ಎಂದರು.






















































