
ಬೆಂಗಳೂರು: ರಾಜ್ಯ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, 2025-26 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಧನ 1,000 ರೂ.ಗಳಷ್ಟು ಹೆಚ್ಚಿಸಿ ಆದೇಶಿಸಿದೆ.
2022-23ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಸೂಚಿಸಲಾಗಿದ್ದು ಈ ಮೂಲಕ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ 1,26,103 ಅಡಿಗೆ ಸಿಬ್ಬಂದಿಯವರ ಗೌರವ ಧನ ಹೆಚ್ಚಳ ಆಗಲಿದೆ.






















































