
ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣವನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಕ್ಲೋಸ್ ಮಾಡಿದೆ.
ಈ ಹಿಂದೆ ಆರು ಮಹಿಳಾ ಕುಸ್ತಿಪಟುಗಳು ಬ್ರಿಜ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದು ನ್ಯಾಯಾಲಯವು ಜೂನ್ 15, 2023 ರಂದು ದೆಹಲಿ ಪೊಲೀಸರು ಸಲ್ಲಿಸಿದ ರದ್ಧತಿ ವರದಿಯನ್ನು ಸ್ವೀಕರಿಸಿದೆ.






















































