
ಮಂಗಳೂರು: ಮೇ 27ರಂದು ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಅಬ್ದುಲ್ ರಹೀಂ ಹತ್ಯೆಯಾದ ಬೆನ್ನಲ್ಲೇ ಮುಸ್ಲಿಂ ಮುಖಂಡರು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದ್ದು ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷದಲ್ಲಿರುವ ಸಮುದಾಯದ ನಾಯಕರು ಸಾಮೂಹಿಕ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ನಮಗೆ ನಿಮ್ಮ ರಾಜಕೀಯ ಬೇಡ. ಜಿಲ್ಲೆಯಲ್ಲಿ ನಮ್ಮವರ ಕೊಲೆ ಎಷ್ಟಾಗಿದೆ? ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಬೇಕು. ಅಮಾಯಕರ ಸಾವಿಗೆ ನ್ಯಾಯ ಕೊಡಿಸಬೇಕೆಂದು ಪಟ್ಟು ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.






















































