
ಅರಬ್ಬೀ ಸಮುದ್ರದಲ್ಲಿ ವಾಯು ಭಾರ ಕುಸಿತದ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಮೇ 30ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೀದರ್, ದಾರವಾಡ ,ಹಾವೇರಿ, ಕಲಬುರ್ಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ,ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































