
ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಪ್ರದೇಶಗಳಿಗೆ ಆರೆಂಜ್ ಘೋಷಿಸಲಾಗಿದ್ದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಟ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್






















































