
ಬೆಂಗಳೂರು: ಕರ್ನಾಟಕದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದ್ದು ಇದರಿಂದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ.
ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಹೊಸ ಗೈಡ್ ಲೈನ್ಸ್ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ.
ಗೈಡ್ ಲೈನ್ಸ್:
- ಮಕ್ಕಳಲ್ಲಿ ಜ್ವರ , ಕೆಮ್ಮು, ನೆಗಡಿ ಗುಣಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು.
- ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು.
- ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು.
- ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು.
- ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು.






















































