
ನವದೆಹಲಿ: ಜೂ.12 ರಂದು ಗುಜರಾತನ ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಪರಿಹಾರ ಘೋಷಣೆ ಮಾಡಿದೆ.
ಜೂ.12 ರಂದು ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು. ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಓರ್ವ ಪವಾಡ ಸದೃಶ್ಯವಾಗಿ ಬದುಕುಳಿದ್ದು, ಮತ್ತೆಲ್ಲರೂ ಮೃತಪಟ್ಟಿದ್ದಾರೆ.
ಟಾಟಾ ಗ್ರೂಪ್ನ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರು ಈ ದುರಂತಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂತಾಪ ಸೂಚಿಸಿದ್ದು “ಈ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರೊಂದಿಗೆ ಇವೆ.
ಈ ದುರಂತದಲ್ಲಿ ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಹಾಗೂ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸಹ ಭರಿಸುತ್ತೇವೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳುತ್ತೇವೆ. ವಿಮಾನ ಪತನಗೊಂಡ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನ ಪುನರ್ನಿರ್ಮಾಣಕ್ಕೆ ನೆರವು ನೀಡುತ್ತೇವೆ” ಎಂದು ಟ್ವೀಟ್ ಮಾಡಿದ್ದಾರೆ.



















