24 C
Udupi
Monday, February 2, 2026
spot_img
spot_img
HomeBlogಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ,ಕೇಂದ್ರ ಸರಕಾರ ಸಮರ್ಪಕ ಕ್ರಮ ಕೈಗೊಳ್ಳಬೇಕು

ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ,ಕೇಂದ್ರ ಸರಕಾರ ಸಮರ್ಪಕ ಕ್ರಮ ಕೈಗೊಳ್ಳಬೇಕು

ಅಹಮದಾಬಾದ್ ವಿಮಾನ ದುರಂತಕ್ಕೆ, ಉದಯ ಶೆಟ್ಟಿ ಮುನಿಯಾಲು ಬೇಸರ

ಗುಜರಾತ್ ರಾಜ್ಯದ ಅಹ್ಮದಾಬಾದ್ ನಗರದಿಂದ ಲಂಡನಿಗೆ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಟೇಕ್ ಆಪ್ ಆದ ಕೆಲವೇ ಕ್ಷಣದಲ್ಲಿ ಪತನಗೊಂಡು 241 ಜನರು ಅಸುನೀಗಿರುವುದು ಅತ್ಯಂತ ನೋವಿನ ವಿಚಾರ, ವಿಮಾನ ಪತನದ ಸಂದರ್ಭದಲ್ಲಿ ಮೆಘಾನಿ ನಗರದ ವಿದ್ಯಾರ್ಥಿ ನಿಲಯದ ಮೇಲೆ ಬಡಿದು ಅಲ್ಲಿನ ವಿದ್ಯಾರ್ಥಿಗಳೂ ಸೇರಿದಂತೆ ಹಲವಾರು ಜನರು ಮೃತರಾಗಿದ್ದಾರೆ. ದುರಂತದಲ್ಲಿ ಸಾವೀಗೀಡಾದವರ ಆತ್ಮಕ್ಕೆ ಶಾಂತಿ ದೊರಕಲಿ, ಮೃತರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ.

ವಿಮಾನ‌ ನಿಲ್ದಾಣದಿಂದ ಹೊರಟು ಕೆಲವೇ ನಿಮಿಷಗಳಲ್ಲಿ ಪತನಗೊಂಡಿರುವುದು ಹಲವಾರು ಪ್ರಶ್ನೆಗಳು ಉದ್ಭವವಾಗಲು ಕಾರಣವಾಗಿದೆ,ಈ ಕುರಿತು ಸಮಗ್ರ ತನಿಖೆಯಾಗಬೇಕು, ಹಾಗು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರವು ಸಮರ್ಪಕ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರವು ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕು ಎಂದು ಉದಯ ಶೆಟ್ಟಿ ಮುನಿಯಾಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page