
ಉಡುಪಿ: ಪರ್ಯಾಯ ಪುತ್ತಿಗೆ ಸುಗುಣೇಂದ್ರ ಶ್ರೀ ಅವರು ಅಹಮದಾಬಾದ್ ನಲ್ಲಿ ನಡೆದ ವಿಮಾನಯಾನ ದುರಂತದ ಕುರಿತು ಪ್ರತಿಕ್ರಿಯಿಸಿದ್ದು ಈ ಘಟನೆ ಆಘಾತವನ್ನುಂಟುಮಾಡಿದೆ. ಸಂತ್ರಸ್ತ ಕುಟುಂಬದವರಿಗೆ ಶ್ರೀ ದೇವರು ಅನುಗ್ರಹ ನೀಡಲಿ ಎಂದು ಹೇಳಿದ್ದಾರೆ.
ಭವಿಷ್ಯದಲ್ಲಿ ಇಂತಹ ಅವಘಡಗಳು ಸಂಭವಿಸಬಾರದು. ಇನ್ನು ಮುಂದೆ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸುರಕ್ಷತೆಗೆ ಒತ್ತು ನೀಡಬೇಕು. ಮೃತರ ಕುಟುಂಬಗಳಿಗೆ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಶ್ರೀಗಳು ಹೇಳಿದ್ದಾರೆ.