
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಆಗಲಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಳೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ,ಶಿವಮೊಗ್ಗ, ಹಾಸನದಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ರಾಮನಗರ ತುಮಕೂರು, ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



































