
ಮೈಸೂರು: ಕೆಆರ್ಎಸ್ ಡ್ಯಾಂಗೆ ಬಾಗಿನ ಅರ್ಪಿಸುವುದಕ್ಕೂ ಮುನ್ನ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ‘ನಾನು ಮತ್ತು ಡಿಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ. ಈ ಸರ್ಕಾರ ಬಂಡೆ ತರ ಐದು ವರ್ಷ ಗಟ್ಟಿಯಾಗಿರುತ್ತದೆ’ ಎಂದು ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಆಂತರಿಕ ಸಂಘರ್ಷ, ಮತ್ತೊಂದೆಡೆ ಶಾಸಕರ ಬಳಿ ಮಾತುಕತೆಗೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಬೆಂಗಳೂರಿಗೆ ಬರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ನಾನು ಮತ್ತು ಡಿಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ ಎಂದು ಹೇಳಿದ್ದಾರೆ.








