
ಉಡುಪಿ: ಜಿಲ್ಲೆಯ ಒಟ್ಟು ಐದು ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಜುಲೈ 5 ರಿಂದ 12 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-3 ನಡೆಯಲಿದೆ.
ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಾಲಂ 163 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.













