
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಆಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ ,ಹಾಸನ ಭಾಗಗಳಲ್ಲಿ ಭಾರಿ ಮಳೆ ಆಗಲಿದ್ದು, ಕರಾವಳಿ ಭಾಗಗಳಾದ ಉಡುಪಿ ,ದಕ್ಷಿಣ ಕನ್ನಡ, ಕಾರವಾರದಲ್ಲೂ ಮಳೆ ಮುಂದುವರಿಯಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













