
ಕಾರ್ಕಳ: ಜುಲೈ 4ರಂದು ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿಯಲ್ಲಿ ಟ್ರಾನ್ಸ್ಫಾರ್ಮರ್ ದುರಸ್ತಿ ಕಾರ್ಯದ ವೇಳೆ ವಿದ್ಯುತ್ ಅಪಘಾತ ಸಂಭವಿಸಿದ್ದು ಪರಿಣಾಮ ಲೈನ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಸಾಣೂರಿನಲ್ಲಿ ರೆಂಜಾಳದ ಉಮೇಶ್ ಆಚಾರ್ಯ ಎಂಬವರು ತಾತ್ಕಾಲಿಕ ಲೈನ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದು ಇಂದು ಮಧ್ಯಾಹ್ನ ಟ್ರಾನ್ಸ್ಫಾರ್ಮರ್ ದುರಸ್ತಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತಾಂತ್ರಿಕ ಕಾರಣದಿಂದ ವಿದ್ಯುತ್ ಪ್ರವಹಿಸಿ ಅವರು ಕೆಳಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಗೆ ಒಳಗಾಗಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ಇನ್ನೋರ್ವ ಲೈನ್ ಮ್ಯಾನ್ ಮತ್ತು ಸ್ಥಳೀಯರು ತಕ್ಷಣ ಉಮೇಶ್ ಅವರನ್ನು ಕಾರ್ಕಳದ ಟಿಎಂಎಪೈ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ಕೊಡಿಸಿದ್ದು ಸದ್ಯ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.













