
ರಾಜ್ಯದ ಬಹುತೇಕ ಕಡೆ ಮಳೆ ಆಗುತ್ತಿದ್ದು ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ ,ಕಾರವಾರ ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆಯ ವೇಳೆಗೆ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್